ಯೆರೆಮೀಯ 26:1 - ಪರಿಶುದ್ದ ಬೈಬಲ್1 ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ [ಯೆರೆಮೀಯನಿಗೆ] ಈ ಅಪ್ಪಣೆಯಾಯಿತು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು. ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.