ಯೆರೆಮೀಯ 26:11 - ಪರಿಶುದ್ದ ಬೈಬಲ್11 ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |