Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:15 - ಪರಿಶುದ್ದ ಬೈಬಲ್‌

15 ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:15
21 ತಿಳಿವುಗಳ ಹೋಲಿಕೆ  

ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.


ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:


ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು