Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:16 - ಪರಿಶುದ್ದ ಬೈಬಲ್‌

16 ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:16
19 ತಿಳಿವುಗಳ ಹೋಲಿಕೆ  

ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.


ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.


ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.


ಎಲ್ನಾಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತ್ನ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.


ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”


ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.


ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು