ಯೆರೆಮೀಯ 26:18 - ಪರಿಶುದ್ದ ಬೈಬಲ್18 ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’ ಅಧ್ಯಾಯವನ್ನು ನೋಡಿ |
ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.