ಯೆರೆಮೀಯ 26:2 - ಪರಿಶುದ್ದ ಬೈಬಲ್2 ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ. ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.