ಯೆರೆಮೀಯ 26:20 - ಪರಿಶುದ್ದ ಬೈಬಲ್20 ಮೊದಲು ಯೆಹೋವನ ಸಂದೇಶವನ್ನು ಪ್ರವಾದಿಸುವ ಇನ್ನೊಬ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್‌ಯಾರೀಮ್ ಎಂಬ ಊರಿನವನು. ಈ ನಗರದ ಬಗ್ಗೆ ಮತ್ತು ಪ್ರದೇಶದ ಬಗ್ಗೆ ಯೆರೆಮೀಯನು ಪ್ರವಾದಿಸಿದ್ದನ್ನೇ ಊರೀಯನು ಪ್ರವಾದಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್‍ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತು ಶಮಾಯನ ಮಗನೂ ಕಿರ್ಯತ್‍ಯಾರೀಮ್ ಊರಿನವನೂ ಆದ ಊರೀಯನೆಂಬವನೊಬ್ಬನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಅಧ್ಯಾಯವನ್ನು ನೋಡಿ |