ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.
ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.
ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.