ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.
ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.