ಯೆರೆಮೀಯ 26:3 - ಪರಿಶುದ್ದ ಬೈಬಲ್3 ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಬಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಬಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಬೇಕೆಂದು ಮಾಡಿದ ಯೋಚನೆಗಳನ್ನು ಬದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಬೇಕೆಂದು ನಾನು ಯೋಚಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು. ಅಧ್ಯಾಯವನ್ನು ನೋಡಿ |
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”