“ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.