Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:5 - ಪರಿಶುದ್ದ ಬೈಬಲ್‌

5 ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:5
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.


ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ.


ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಈ ಯೋಜನೆ.”


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು