ಯೆರೆಮೀಯ 26:6 - ಪರಿಶುದ್ದ ಬೈಬಲ್6 ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ” ಅಧ್ಯಾಯವನ್ನು ನೋಡಿ |
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.