Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:9 - ಪರಿಶುದ್ದ ಬೈಬಲ್‌

9 ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:9
28 ತಿಳಿವುಗಳ ಹೋಲಿಕೆ  

ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.


ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.


ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.


ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.


ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.


“‘ನಮ್ಮ ದೇಶವು ಒಂದು ಬರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು.


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು