ಯೆರೆಮೀಯ 27:10 - ಪರಿಶುದ್ದ ಬೈಬಲ್10 ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ. ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.