11 “‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.
11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”
11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು.
ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬದುಕುವೆ.
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.