Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:12 - ಪರಿಶುದ್ದ ಬೈಬಲ್‌

12 ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:12
11 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು.


ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:


“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.


ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”


ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಬಾಬಿಲೋನಿನ ರಾಜನು ಹೊರಿಸಿದ ನೊಗವನ್ನು ನಾನು ಮುರಿದುಹಾಕುವೆನು.


ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.


ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು