ಯೆರೆಮೀಯ 27:13 - ಪರಿಶುದ್ದ ಬೈಬಲ್13 ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನೂ ನಿನ್ನ ಜನರೂ ಖಡ್ಗ ಕ್ಷಾಮವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವದೆಂದು ಯೆಹೋವನು ನುಡಿದಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು? ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.