ಯೆರೆಮೀಯ 27:14 - ಪರಿಶುದ್ದ ಬೈಬಲ್14 ಆದರೆ ನೀವೆಂದಿಗೂ ಬಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.