ಯೆರೆಮೀಯ 27:15 - ಪರಿಶುದ್ದ ಬೈಬಲ್15 ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’