ಯೆರೆಮೀಯ 27:18 - ಪರಿಶುದ್ದ ಬೈಬಲ್18 ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ. ಅಧ್ಯಾಯವನ್ನು ನೋಡಿ |
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.