ಯೆರೆಮೀಯ 27:3 - ಪರಿಶುದ್ದ ಬೈಬಲ್3 ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.