Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:4 - ಪರಿಶುದ್ದ ಬೈಬಲ್‌

4 ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆ ರಾಯಭಾರಿಗಳಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:4
8 ತಿಳಿವುಗಳ ಹೋಲಿಕೆ  

ಆದರೆ ಯಾಕೋಬ್ಯರ ಸ್ವಾಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು