ಯೆರೆಮೀಯ 27:5 - ಪರಿಶುದ್ದ ಬೈಬಲ್5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.