ಯೆರೆಮೀಯ 27:6 - ಪರಿಶುದ್ದ ಬೈಬಲ್6 ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’