Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:7 - ಪರಿಶುದ್ದ ಬೈಬಲ್‌

7 ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:7
29 ತಿಳಿವುಗಳ ಹೋಲಿಕೆ  

ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.


ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


“ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ.


ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಬೂಕದ್ನೆಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಬರುವುದರ ಬಗ್ಗೆ ಇದೆ.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಅರಸನೇ, ನೀನೇ ಆ ಮರ. ನೀನು ಪ್ರಖ್ಯಾತನೂ ಮತ್ತು ಪ್ರಬಲನೂ ಆಗಿರುವೆ. ನೀನು ಗಗನಚುಂಬಿಯಾದ ಆ ಮರದಂತೆ ಬೆಳೆದಿರುವೆ. ನಿನ್ನ ಪ್ರಾಬಲ್ಯವು ಈ ಭೂಮಿಯಲ್ಲಿ ದೂರದೂರದವರೆಗೆ ಹಬ್ಬಿದೆ.


ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.


ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು