ಯೆರೆಮೀಯ 27:9 - ಪರಿಶುದ್ದ ಬೈಬಲ್9 ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.