ಯೆರೆಮೀಯ 28:1 - ಪರಿಶುದ್ದ ಬೈಬಲ್1 ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಬ ಪ್ರವಾದಿಯು ನನ್ನೊಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಬ್ಯೋನ್ ಊರಿನವನು. ನನ್ನೊಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.
ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.