ಯೆರೆಮೀಯ 28:14 - ಪರಿಶುದ್ದ ಬೈಬಲ್14 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ” ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.