ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.
ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.