Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:4 - ಪರಿಶುದ್ದ ಬೈಬಲ್‌

4 ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನು. ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:4
20 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಬಾಬಿಲೋನಿನ ರಾಜನು ಹೊರಿಸಿದ ನೊಗವನ್ನು ನಾನು ಮುರಿದುಹಾಕುವೆನು.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”


ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.


ಯೆರೆಮೀಯನು ತನ್ನ ಹೆಗಲಿನ ಮೇಲೆ ನೊಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನ್ನು ತೆಗೆದುಕೊಂಡು ಆ ನೊಗವನ್ನು ಮುರಿದುಹಾಕಿದನು.


ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.


ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.


ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು