ಯೆರೆಮೀಯ 28:9 - ಪರಿಶುದ್ದ ಬೈಬಲ್9 ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.