ಯೆರೆಮೀಯ 29:2 - ಪರಿಶುದ್ದ ಬೈಬಲ್2 (ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು: