Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:21 - ಪರಿಶುದ್ದ ಬೈಬಲ್‌

21 ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:21
8 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


“ಆದರೆ ಯೆಹೋವನು ನಮಗೆ ಬಾಬಿಲೋನಿನಲ್ಲಿಯೇ ಪ್ರವಾದಿಗಳನ್ನು ಕೊಟ್ಟಿದ್ದಾನೆ” ಎಂದು ನೀವು ಹೇಳಬಹುದು.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು