Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:22 - ಪರಿಶುದ್ದ ಬೈಬಲ್‌

22 ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:22
7 ತಿಳಿವುಗಳ ಹೋಲಿಕೆ  

ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.


ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು