Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:25 - ಪರಿಶುದ್ದ ಬೈಬಲ್‌

25 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:25
16 ತಿಳಿವುಗಳ ಹೋಲಿಕೆ  

ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.


ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”


ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.


ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು.


ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.


ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗಿತ್ತು: “ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಕೀಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ.”


ಹಿಜ್ಕೀಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಕೀಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಆ ಪತ್ರಗಳನ್ನಿರಿಸಿದನು.


ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.


ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು