Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:26 - ಪರಿಶುದ್ದ ಬೈಬಲ್‌

26 ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:26
28 ತಿಳಿವುಗಳ ಹೋಲಿಕೆ  

ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.


ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.


ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಆದರೆ ನನ್ನ ಕೆಲವು ಸ್ನೇಹಿತರು ನನ್ನನ್ನು ಬುಟ್ಟಿಯೊಳಗೆ ಕುಳ್ಳಿರಿಸಿ, ಗೋಡೆಯ ಕಿಟಕಿಯೊಳಗಿಂದ ಕೆಳಗಿಳಿಸಿದರು. ಹೀಗೆ ನಾನು ರಾಜ್ಯಪಾಲನಿಂದ ತಪ್ಪಿಸಿಕೊಂಡೆನು.


ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.


ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು.


ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.


ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.


ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?


ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.


ಪೌಲನು, “ಮಹಾರಾಜಶ್ರೀಗಳಾದ ಫೆಸ್ತನೇ, ನಾನು ಹುಚ್ಚನಲ್ಲ. ನಾನು ಹೇಳುತ್ತಿರುವುದು ಸತ್ಯಸಂಗತಿಗಳಾಗಿವೆ. ನನ್ನ ಮಾತುಗಳು ಮೂರ್ಖನ ಮಾತುಗಳಲ್ಲ. ನಾನು ಸ್ವಸ್ಥಬುದ್ಧಿಯುಳ್ಳವನಾಗಿದ್ದೇನೆ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು