ಯೆರೆಮೀಯ 29:31 - ಪರಿಶುದ್ದ ಬೈಬಲ್31 “ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ, ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.