Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:5 - ಪರಿಶುದ್ದ ಬೈಬಲ್‌

5 “ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ. ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ಅನುಭವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:5
4 ತಿಳಿವುಗಳ ಹೋಲಿಕೆ  

ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’”


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು