12 ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
12 ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.
12 ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.
ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನ್ನ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶ್ವತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಯೆಹೂದ, ನೀನು ಹಾಗೆ ಹೇಳಿದರೂ, ನಿನ್ನಿಂದಾದಷ್ಟು ಕೆಡುಕನ್ನು ಮಾಡುತ್ತಿರುವೆ.”
ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಈಗ ನಾನು ಯಾಕೋಬನ ವಂಶದವರನ್ನು ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನ್ನ ದಯೆ ಇರುವದು. ನನ್ನ ಪವಿತ್ರನಾಮದ ಸಲುವಾಗಿ ಅವರನ್ನು ಉದ್ಧರಿಸುವೆನು.
ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.
“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.
‘ಈ ದುಷ್ಕೃತ್ಯಗಳನ್ನೆಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಬಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”
ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು
ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.
“ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.
ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.