Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:16 - ಪರಿಶುದ್ದ ಬೈಬಲ್‌

16 ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ದೇಶದಲ್ಲಿ ಹೆಚ್ಚಿನ ವೃದ್ಧಿಗೆ ಬಂದಿರುವಾಗ ಇನ್ನು ಯೆಹೋವನ ನಿಬಂಧನಮಂಜೂಷದ ಪ್ರಸ್ತಾಪವಿರದು, ಅದು ಜ್ಞಾಪಕಕ್ಕೆಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು, ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:16
24 ತಿಳಿವುಗಳ ಹೋಲಿಕೆ  

ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


“ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”


ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ.


ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು