ಯೆರೆಮೀಯ 3:21 - ಪರಿಶುದ್ದ ಬೈಬಲ್21 ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು. ಅಧ್ಯಾಯವನ್ನು ನೋಡಿ |