ಯೆರೆಮೀಯ 3:22 - ಪರಿಶುದ್ದ ಬೈಬಲ್22 ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’