ಯೆರೆಮೀಯ 3:25 - ಪರಿಶುದ್ದ ಬೈಬಲ್25 ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.” ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.