Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:6 - ಪರಿಶುದ್ದ ಬೈಬಲ್‌

6 ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:6
24 ತಿಳಿವುಗಳ ಹೋಲಿಕೆ  

“ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನ್ನು ಪ್ರತೀ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣ ತೆಗೆದುಕೊಳ್ಳಲಿಲ್ಲ.


ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ.


ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.


ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.


ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.


ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.


“ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”


ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು