ಯೆರೆಮೀಯ 3:8 - ಪರಿಶುದ್ದ ಬೈಬಲ್8 ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಆಕೆಯ ಹೊಸ ಗಂಡನೂ ಆಕೆಯನ್ನು ಇಷ್ಟಪಡದೆ ಮನೆಯಿಂದ ಹೊರಗೆ ಕಳುಹಿಸಿದರೆ ಅಥವಾ ಎರಡನೆ ಗಂಡನು ಸತ್ತುಹೋದರೆ ಆಕೆಯ ಮೊದಲನೆಯ ಗಂಡನು ಆಕೆಯನ್ನು ಮತ್ತೆ ಮದುವೆಯಾಗಬಾರದು. ಅವನಿಗೆ ಆಕೆಯು ಅಶುದ್ಧಳಾದಳು. ಅವನು ಆಕೆಯನ್ನು ಮತ್ತೆ ಮದುವೆಯಾದಲ್ಲಿ ಅವನು ಯೆಹೋವನಿಗೆ ಅಸಹ್ಯವಾದದ್ದನ್ನು ಮಾಡುವವನಾಗಿದ್ದಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಇಂಥ ಪಾಪಗಳನ್ನು ಮಾಡಬಾರದು.
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.