ಯೆರೆಮೀಯ 30:13 - ಪರಿಶುದ್ದ ಬೈಬಲ್13 ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.