ಯೆರೆಮೀಯ 30:17 - ಪರಿಶುದ್ದ ಬೈಬಲ್17 ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |