ಯೆರೆಮೀಯ 30:18 - ಪರಿಶುದ್ದ ಬೈಬಲ್18 ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.