Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:21 - ಪರಿಶುದ್ದ ಬೈಬಲ್‌

21 ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:21
53 ತಿಳಿವುಗಳ ಹೋಲಿಕೆ  

ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.


ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.


ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.


ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು